ಉಡುಪಿ : ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ ಉಡುಪಿ ಜಿಲ್ಲೆಯಿಂದ ಯಾತ್ರೆ ಅಥವಾ ಪ್ರವಾಸಕ್ಕೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಅಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಕರೆತರಲು ಜಿಲ್ಲಾ ಮಟ್ಟದಲ್ಲಿ ತುರ್ತು ಸಹಾಯವಾಣಿಯನ್ನು ತೆರೆಯಲಾಗಿದ್ದು, ಸಂಕಷ್ಟಕ್ಕೀಡಾದವರ ಕುಟುಂಬಸ್ಥರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಂಕಷ್ಟದಲ್ಲಿರುವ ವ್ಯಕ್ತಿಗಳ ಹೆಸರು, ವಿಳಾಸ, ಅವರ ಪ್ರಸ್ತುತ ನಿಖರ ಸ್ಥಳ, ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ತುರ್ತು ಅಗತ್ಯಗಳ ವಿವರಗಳನ್ನು ಸಾರ್ವಜನಿಕರು ತಕ್ಷಣವೇ ಜಿಲ್ಲಾಡಳಿತಕ್ಕೆ ಒದಗಿಸುವಂತೆ ಕೋರಲಾಗಿದೆ.
ಉಚಿತ ಸಹಾಯವಾಣಿ ಸಂಖ್ಯೆ (Toll-Free): 1077
ದೂರವಾಣಿ ಸಂಖ್ಯೆ: 0820-2574802
ಆನ್‌ಲೈನ್ ನೋಂದಣಿ: ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಗೂಗಲ್ ಫಾರ್ಮ್ ಲಿಂಕ್ (Google Form) ಮುಖಾಂತರವೂ ವಿವರಗಳನ್ನು ದಾಖಲಿಸಬಹುದಾಗಿದೆ.





