Home Karavali Karnataka ಆಕಸ್ಮಿಕವಾಗಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ : ದ್ವಿಚಕ್ರ ವಾಹನಕ್ಕೆ ಹಾನಿ…!!

ಆಕಸ್ಮಿಕವಾಗಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ : ದ್ವಿಚಕ್ರ ವಾಹನಕ್ಕೆ ಹಾನಿ…!!

ಮಂಗಳೂರು: ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ.

ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ.

ಅಲ್ಲದೆ, ಅದೇ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮರ ಕುಸಿತದ ಪರಿಣಾಮವಾಗಿ ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಘಟನೆ ನಡೆದ ತಕ್ಷಣ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.