ಉಡುಪಿ: ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲು ಮಾಡಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸಾಜೀದ್ ಹಾಗೂ ಸೈಯದ್ ಸೈಫ್ ಅಹಮ್ಮದ್ ಎಂದು ಗುರುತಿಸಲಾಗಿದೆ ಮ
ಆರೋಪಿಗಳು ಮೃತ ವ್ಯಕ್ತಿಯ ಕುಟುಂಬಕ್ಕೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಪ್ರಕರಣದ ಹಿನ್ನೆಲೆ ಬಗ್ಗೆ ತನಿಖೆ ಮುಂದುವರಿದಿದೆ.






