ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ
ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ ಆರೋಪಿ ಕೇಶವ ಅವರಿಗೆ ಪುತ್ತೂರು ನ್ಯಾಯಾಲಯ ಈ ಹಿಂದೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಬಳಿಕ ಎರಡನೇ ಆರೋಪಿ ಮನೀಷ್‌ಗೂ ಹೈಕೋರ್ಟ್ ಜಾಮೀನು ನೀಡಿತ್ತು.
ಇದೀಗ ಪ್ರಕರಣದ ಪ್ರಥಮ ಆರೋಪಿ ಚೇತನ್‌ಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.




