Home Latest ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ…!!

ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ…!!

ಉಡುಪಿ : ವೃದ್ಧೆಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ವಾಸವಿದ್ದ ಬಾಡಿಗೆ ಮನೆಯ ಸನಿಹದ, ಗುಡ್ಡೆಯಲ್ಲಿ ಪತ್ತೆಯಾಗಿರುವ ಘಟನೆ ಮಣಿಪಾಲದ ರಾಜೀವನಗರ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ವೃದ್ದೆಯನ್ನು ಗೀತಾ ಮಲ್ಯ (68ವ), ಈ ಹಿಂದೆ ಹಲವು ವರ್ಷಗಳ ಕಾಲ ತಾತ್ಕಾಲಿಕ ನೆಲೆಯಲ್ಲಿ ಉಡುಪಿಯ ಜಿಲ್ಲಾ ಕೇಂದ್ರ ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ.

ಅನಾರೋಗ್ಯದಿಂದ ಮೃತಪಟ್ಟಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯ ಆರಕ್ಷಕ ಸುಕುಮಾರ್ ಶೆಟ್ಟಿಯವರು, ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕಳೇಬರವನ್ನು ಸ್ಥಳದಿಂದ ತೆರವುಗೊಳಿಸಿ, ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು. ಮಿಥುನ್, ಅಜಿತ್ ತಸಹಕರಿಸಿದರು.