Home Crime ಕಡಬ: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ : ಓರ್ವ ವಶಕ್ಕೆ…!!

ಕಡಬ: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸ್ ದಾಳಿ : ಓರ್ವ ವಶಕ್ಕೆ…!!

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಅಂದ‌ರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ವ್ಯಕ್ತಿ ಕಡಬ ಕುದ್ಮಾರು ನಿವಾಸಿ ಗುರುವ (44) ಎಂದು ತಿಳಿದು ಬಂದಿದೆ.

ಆ.28ರಂದು ಸಂಜೆ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪಿಎಸ್‌ಐ ಜಂಬುರಾಜ್ ಮಹಾಜನ್‌ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಇಸ್ಪೀಟ್ ಎಲೆ, ನಗದು ರೂ. 1,700, ಆರೋಪಿಗಳು ಬಿಟ್ಟು ಹೋದ 2 ದ್ವಿಚಕ್ರ ವಾಹನ ಹಾಗೂ 1 ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.