Home Crime ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

ಬೆಳ್ತಂಗಡಿ : ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೊರಚರಟ್ಟಿಯ ಶ್ರೀನಿವಾಸ್ ಕೆ. (43) ಅಲಿಯಾಸ್ ಶೀನಪ್ಪ ಅಲಿಯಾಸ್ ಶೀನಾ ಬಂಧಿತ ಆರೋಪಿ.

2012ರಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಣೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.