Home Karkala News ಮುಂಡ್ಕೂರು: ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ..!!

ಮುಂಡ್ಕೂರು: ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ..!!

ಕಾರ್ಕಳ: ಶ್ರೀ ನಾರಾಯಣ ಗುರು ಸೇವಾ ಸಂಘ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ಪೊಸ್ರಾಲು ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವೇದಮೂರ್ತಿ ಶ್ರೀ ಮಹೇಶ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ, ಕ್ಷೇತ್ರದ ಅರ್ಚಕರಾದ ಶ್ರೀ ಕೇಶವ ಅಂಚನ್ ಅವರ ಉಪಸ್ಥಿತಿಯಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮದಿನಾಚರಣೆ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಪೂರ್ವಾಹ್ನ 8.30ಕ್ಕೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ, ನವಕ ಅಭಿಷೇಕ, ಅಲಂಕಾರ ಪೂಜೆ, ಪಾದ ಪೂಜೆಯ ಬಳಿಕ ತೀರ್ಥ ಪ್ರಸಾದ ವಿತರಣೆಗೊಂಡು ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲೋಕೇಶ್ ಪೂಜಾರಿ, ಕಾರ್ಯದರ್ಶಿ ಕೃಷ್ಣ ಸಾಲ್ಯಾನ್, ಕೋಶಾಧಿಕಾರಿ ಸೋಮನಾಥ ಪೂಜಾರಿ, ಕೇಶವ ಪೂಜಾರಿ, ಗೌರವಾಧ್ಯಕ್ಷ ಶ್ರೀಧರ ಸನಿಲ್, ಪುರುಷೋತ್ತಮ ಪೂಜಾರಿ ಜೋಗಿನಾಡು, ಕೃಷ್ಣ ಪೂಜಾರಿ ಬಂಟ್ರೋಟ್ಟು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.