Home Karkala News ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ…!!

ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ…!!

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ


2023ರ ಯುಪಿಎಸ್ಸಿ ಅಖಿಲ ಭಾರತ ಸಿವಿಲ್ ಸೇವಾ ಪರೀಕ್ಷೆಯಲ್ಲಿ ಇಶಿತಾ ಗುಪ್ತಾ ಅವರು 154ನೇ ರ್ಯಾಂಕ್ ಪಡೆದಿದ್ದರು. ಅವರು ಪ್ರೊಬೇಷನರಿ ತರಬೇತಿಯನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಕಾರ್ಕಳ ಉಪವಿಭಾಗಕ್ಕೆ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾರ್ಕಳದಲ್ಲಿ ಈ ಹಿಂದೆ ಎಎಸ್ಪಿಯಾಗಿದ್ದ ಡಾ. ಹರ್ಷಪ್ರಿಯಾಂವದ ಅವರನ್ನು ಬೆಂಗಳೂರಿನ CID ಗೆ ಎಸ್ಪಿಯಾಗಿ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.