ಮಂಗಳೂರು : ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ 2010ರ ಐಪಿಎಸ್ ಬ್ಯಾಚ್‌ನ ಕರ್ನಾಟಕ ಕೇಡರ್ ಅಧಿಕಾರಿ ಚೇತನ್ ಆರ್. ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಐಜಿಪಿ ಅಮಿತ್ ಸಿಂಗ್ ಅವರು ಪೊಲೀಸ್ ದಂಡವನ್ನು ಹಸ್ತಾಂತರಿಸುವ ಮೂಲಕ ಚೇತನ್ ಆರ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಚೇತನ್ ಆರ್. ಅವರು ಈ ಹಿಂದೆ ಕರಾವಳಿ ಕಾವಲು ಪಡೆಯ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಪಶ್ಚಿಮ ವಲಯದ ಐಜಿಪಿ ಹುದ್ದೆಗೆ ನೇಮಕಗೊಂಡಿರುವ ಅವರು, ವಲಯ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ನೇತೃತ್ವ ನೀಡಲಿದ್ದಾರೆ.
ಪಶ್ಚಿಮ ವಲಯದ ಐಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅಮಿತ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.




