Home Latest ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಕುರಿತು ಉಪನ್ಯಾಸ…!!

ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಕುರಿತು ಉಪನ್ಯಾಸ…!!

ಉಡುಪಿ: ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ವಿಶೇಷ ಉಪನ್ಯಾಸ ನೀಡಿದರು.

ಶ್ರೀಕೃಷ್ಣನ ಜೀವನ, ಆತನ ರಾಜನೀತಿ ಹಾಗೂ ಇಂದಿನ ಸಮಾಜದಲ್ಲಿ ಅದರ ಪ್ರಸ್ತುತತೆಯ ಕುರಿತು ಅವರು ವಿಚಾರಗಳನ್ನು ಹಂಚಿಕೊಂಡರು.ಈ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು, ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.