ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದ ಸಮೀಪ ಬೆಳ್ಮಣ್ ಗ್ರಾಮದ ಕುಂಟೊಟ್ಟು ಮನೆಯಲ್ಲಿ 53 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಆಸ್ಟಿನ್ (53) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸೆಪ್ಟೆಂಬರ್ 1ರ ರಾತ್ರಿ 8 ಗಂಟೆಯಿಂದ ಸೆಪ್ಟೆಂಬರ್ 2ರ ಬೆಳಗ್ಗೆ 8 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.




