Home Uncategorized ಪಡುಬಿದ್ರಿ: ವ್ಯಕ್ತಿ ನಾಪತ್ತೆ…!!

ಪಡುಬಿದ್ರಿ: ವ್ಯಕ್ತಿ ನಾಪತ್ತೆ…!!

ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಆಗಸ್ಟ್ 9ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನಾಪತ್ತೆಯಾದ ವ್ಯಕ್ತಿ ಯಮನಪ್ಪ ಮಾದರ (40) ಎಂದು ತಿಳಿದು ಬಂದಿದೆ.

ಇವರು 5 ಅಡಿ 5 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ ಸಾಧಾರಣ ಶರೀರ ಹೊಂದಿದ್ದು ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರೆ ಪೊಲೀಸ್‌ ಠಾಣೆಯ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.