ಬೆಳ್ತಂಗಡಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೆಪ್ಟೆಂಬರ್ 3ರಂದು ರಾತ್ರಿ ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ನಡೆದಿದೆ.
ಮೃತರನ್ನು ಚಾರ್ಮಾಡಿ ಗ್ರಾಮದ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿದ್ದ ದಯಾನಂದ ಗೌಡ ಅವರು ಉಜಿರೆಯ ಗ್ಯಾರೇಜ್‌ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.
ಕೆಲಸ ಮುಗಿಸಿಕೊಂಡು ರಾತ್ರಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಂಭವಿಸಿದ್ದು ಹೇಗೆ? ಚಿಬಿದ್ರೆ ಸಮೀಪ ಚಲಿಸುತ್ತಿದ್ದ ವೇಳೆ ತರಕಾರಿ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ದಯಾನಂದ ಗೌಡ ಅವರು ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




