Home Crime ಕುಂದಾಪುರ: ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಕಸ್ಮಿಕವಾಗಿ ಬಿದ್ದು ಮೃತ್ಯು..!!

ಕುಂದಾಪುರ: ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಕಸ್ಮಿಕವಾಗಿ ಬಿದ್ದು ಮೃತ್ಯು..!!

ಕುಂದಾಪುರ: ಕಟ್ಟಡ ಕಾಮಗಾರಿ ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದು ಕಟ್ಟಡ ಕಾಮಗಾರಿ ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರದ ಹಂಗಳೂರಿನಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ್ (42) ಮೃತ ಕಾರ್ಮಿಕ

ಪೈಂಟಿಂಗ್ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ ಪೂಜಾರಿ ಅವರೊಂದಿಗೆ ರಾಜು ಕಶ್ಯಪ್ ಕಳೆದ ಒಂದು ತಿಂಗಳಿನಿಂದ ಕೆಲಸ ಮಾಡುತ್ತಿದ್ದರು. ಹಂಗಳೂರಿನ ಕಾಮಗಾರಿ ನಡೆಯುತ್ತಿದ್ದ ಸೈಟ್‌ನ ಮೊದಲ ಮಹಡಿಯಲ್ಲಿ ಇತರ ಕಾರ್ಮಿಕರೊಂದಿಗೆ ವಾಸವಾಗಿದ್ದರು.

ಸೆಪ್ಟೆಂಬರ್ 1ರಂದು ರಾತ್ರಿ ಸುಮಾರು 11:30ರ ವೇಳೆಗೆ ರಾಜು ಕಶ್ಯಪ್ ಮದ್ಯ ಸೇವಿಸಿ ಊಟ ಮಾಡಿ ಮಲಗಿದ್ದರು. ಬಳಿಕ ಯಾವುದೋ ಕಾರಣಕ್ಕೆ ಎದ್ದ ವೇಳೆ ಆಕಸ್ಮಿಕವಾಗಿ ಸೈಟ್‌ನ ಅಂತಸ್ತಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ, ಬಳಿಕ ಉಡುಪಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೆಪ್ಟೆಂಬರ್ 3ರಂದು ರಾತ್ರಿ 10:17ರ ಸುಮಾರಿಗೆ ರಾಜು ಕಶ್ಯಪ್ ಮೃತಪಟ್ಟಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ