Home Crime ಕಾರ್ಕಳ : ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ ಮೃತ್ಯು…!!

ಕಾರ್ಕಳ : ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕ ಮೃತ್ಯು…!!

ಕಾರ್ಕಳ : ಕೂಲಿ ಕೆಲಸಕ್ಕೆ ತೆರಳಿ ಮನೆಗೆ ವಾಪಸಾದ 20 ವರ್ಷದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬಾ ಗ್ರಾಮದ ಜರಿಗುಡ್ಡೆ ಸಾಲ್ಮರದಲ್ಲಿ ನಡೆದಿದೆ.

ಮೃತ ಯುವಕನನ್ನು ರಾಚಯ್ಯ (20) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 4ರಂದು ಕೂಲಿ ಕೆಲಸ ಮುಗಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ಬಂದಿದ್ದ ರಾಚಯ್ಯ, ತನ್ನ ಕೊಠಡಿಗೆ ತೆರಳಿ ಚಿಲಕ ಹಾಕಿಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ.

ರಾತ್ರಿ ಸುಮಾರು 11:30ರ ವೇಳೆಗೆ ತಂದೆ ಸಂಗಯ್ಯ ರಾಚಯ್ಯ ವಿರಕ್ತಮಠ ಅವರು ಊಟಕ್ಕೆ ಕರೆಯಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ರಾಚಯ್ಯ ಅವರು ಕೊಠಡಿಯ ಫ್ಯಾನ್‌ಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ತಕ್ಷಣ ಕೊಠಡಿಯ ಚಿಲಕವನ್ನು ಮುರಿದು ಒಳಗೆ ತೆರಳಿ, ರಾಚಯ್ಯ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಪರೀಕ್ಷಿಸಿ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಘಟನೆ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.