Home Crime ಉಡುಪಿ: ನಿವೃತ್ತ ಪೋಸ್ಟ್ ಮಾಸ್ಟರ್ ನಾಪತ್ತೆ…!!

ಉಡುಪಿ: ನಿವೃತ್ತ ಪೋಸ್ಟ್ ಮಾಸ್ಟರ್ ನಾಪತ್ತೆ…!!

ಉಡುಪಿ: ನಿವೃತ್ತ ಪೋಸ್ಟ್ ಮಾಸ್ಟರ್ ವೊಬ್ಬರು ಆ.29ರಂದು ವಾಕಿಂಗ್‌ಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾದವರು ಹೆಬ್ರಿ ತಾಲೂಕು ಶೇಡಿಮನೆ ಗ್ರಾಮ ಅಗಳಿಬೈಲು ನಿವಾಸಿ, ನಿವೃತ್ತ ಪೋಸ್ಟ್ ಮಾಸ್ಟರ್ ಸುರತ್ ಕುಮಾ‌ರ್ ಶೆಟ್ಟಿ (64) ಎಂದು ತಿಳಿದು ಬಂದಿದೆ.

ಇವರು 5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಗೋಧಿ ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಕುರಿತು ಮಾಹಿತಿ ದೊರೆತಲ್ಲಿ ಅಮಾಸೆಬೈಲು ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.