Home Crime ಬಜ್ಪೆ: ತ್ಯಾಜ್ಯ ಸಾಗಾಟದ ವಾಹನ ಢಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು…!!

ಬಜ್ಪೆ: ತ್ಯಾಜ್ಯ ಸಾಗಾಟದ ವಾಹನ ಢಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು…!!

ಬಜ್ಪೆ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ದ್ವಿಚಕ್ರ ವಾಹನವೊಂದಕ್ಕೆ ತ್ಯಾಜ್ಯ ಸಾಗಾಟದ ವಾಹನವೊಂದು ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ..

ಮೃತಪಟ್ಟ ಸವಾರ ಸುದೀಪ್ ಶೆಟ್ಟಿ (33) ಎಂದು ತಿಳಿದು ಬಂದಿದೆ.

ಬೆಳಗ್ಗೆ ಬಜ್ಪೆ ಕಿನ್ನಿಪದವು ಎಂಬಲ್ಲಿ ತ್ಯಾಜ್ಯ ಸಾಗಾಟದ ವಾಹನದ ಚಾಲಕ ಯಾವುದೇ ಮಾಹಿತಿ ನೀಡದೆ ಏಕಾಏಕಿ ಬಲಭಾಗಕ್ಕೆ ತಿರುವು ಪಡೆದುಕೊಂಡಿದ್ದರಿಂದ ಪಕ್ಕದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಸುದೀಪ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಘಟನೆಯಿಂದ ನಿಯಂತ್ರಣ ಕಳೆದುಕೊಂದ ಸುದೀಪ್ ಅವರು ಕಾಂಕ್ರಿಟ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ತಲೆಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಸ್ಥಳೀಯರು ಅವರನ್ನು ಬಜ್ಪೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕತ್ಸೆ ನೀಡಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ‌ ಎಂದು ತಿಳಿದು ಬಂದಿದೆ.

ಈ ಕುರಿತು ತ್ಯಾಜ್ಯ ಸಾಗಾಟ ವಾಹನದ ಚಾಲಕನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.