Home Crime ಉಡುಪಿ: “ವಾರ್ತಾ ಭಾರತಿ” ಫೇಸ್ ಬುಕ್ ಪೇಜ್ ನಲ್ಲಿ ಅವಾಚ್ಯ ಕಮೆಂಟ್ : ಆರೋಪಿ ಅರೆಸ್ಟ್…!!

ಉಡುಪಿ: “ವಾರ್ತಾ ಭಾರತಿ” ಫೇಸ್ ಬುಕ್ ಪೇಜ್ ನಲ್ಲಿ ಅವಾಚ್ಯ ಕಮೆಂಟ್ : ಆರೋಪಿ ಅರೆಸ್ಟ್…!!

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಪ್ರತಿಕ್ರಿಯೆ ನೀಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಫೇಸ್‌ಬುಕ್‌ನ ‘ವಾರ್ತಾ ಭಾರತಿ’ ಪೇಜ್‌ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ತರಕಾರಿ ವ್ಯಾಪಾರ ನಡೆಸುವ ಮಹಮ್ಮದ್ ಅವರ ಸಂದರ್ಶನಕ್ಕೆ ಸಂಬಂಧಿಸಿದಂತೆ ಪ್ರಕಟವಾದ ‘ರಂಜಾನ್ ಕಥೆಯ ಇಂದಿನ ಹೀರೋ ಮಂಗಳೂರಿನ ಮಹಮ್ಮದ್’ ಎಂಬ ಪೋಸ್ಟ್‌ಗೆ ‘ಹೆಮ್ಮೆಯ ಕಾರ್ಯಕರ್ತ’ ಎಂಬ ಹೆಸರಿನ ಖಾತೆಯಿಂದ ಅವಾಚ್ಯವಾಗಿ ಕಾಮೆಂಟ್ ಮಾಡಿರುವುದು ಗಮನಕ್ಕೆ ಬಂದಿದೆ.

ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 31/2025ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 353(2) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಕಲಂ 66(C)ರಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಪೊಲೀಸ್ ಠಾಣಾ ನಿರೀಕ್ಷಕ ಜಯರಾಮ್ ಡಿ ಗೌಡ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಪ್ರಕರಣದ ಆರೋಪಿ, ಬೆಂಗಳೂರಿನ ಪ್ರಕಾಶ್ ಎಸ್‌ (45) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.