Home Crime ಉಡುಪಿ: ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು…!!

ಉಡುಪಿ: ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು…!!

ಉಡುಪಿಯಲ್ಲಿ ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ದ್ಯಾಮಪ್ಪ ಹುನಕುಂಡಿ (41) ಎಂದು ಗುರುತಿಸಲಾಗಿದೆ.

ಇವರು ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಗುಂಡಿಬೈಲಿನ ಇಂಡಿಯನ್ ಪೆಟ್ರೋಲ್ ಬಂಕ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸೆಪ್ಟೆಂಬರ್ 4ರಂದು ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದ ದ್ಯಾಮಪ್ಪ ಅವರು ರಾತ್ರಿ ಸುಮಾರು 7 ಗಂಟೆಗೆ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ.

ಈ ಬಗ್ಗೆ ಪಕ್ಕದ ಮನೆಯವರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ತಕ್ಷಣ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆ ವೇಳೆ ಕಿವಿಯಿಂದ ರಕ್ತಸ್ರಾವವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಸೆಪ್ಟೆಂಬರ್ 5ರಂದು ಮಧ್ಯಾಹ್ನ ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಹೋಗಲಾಗಿತ್ತು.

ಆದರೆ ಸಂಜೆ ಸುಮಾರು 4 ಗಂಟೆಗೆ ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು 20 ನಿಮಿಷಗಳ ಚಿಕಿತ್ಸೆ ನೀಡಿದ ಬಳಿಕ ಸಂಜೆ 5:15ಕ್ಕೆ ದ್ಯಾಮಪ್ಪ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.