ಕುಂದಾಪುರ : ಗಂಗೊಳ್ಳಿ ರಥಬೀದಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ ಠಾಣೆಯ ಬೀಟ್ ಸಿಬ್ಬಂದಿಗೆ ದೊರೆತ ಮಾಹಿತಿಯ ಆಧಾರದ ಮೇಲೆ ಪಿಎಸ್‌ಐ ಸುಧರ್ಶನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.
ಈ ವೇಳೆ ಉದಯ ದೇವಾಡಿಗ ಎಂಬಾತ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಒಂದು ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಕೂಗುತ್ತಾ ಮಟ್ಕಾ ಜುಗಾರಿ ನಡೆಸುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಮಟ್ಕಾ ಜುಗಾರಿಗೆ ಬಳಸಿದ್ದ ₹750 ನಗದು, ಮಟ್ಕಾ ಚೀಟಿ ಹಾಗೂ ಬಾಲ್ ಪೆನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




