ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಸವಲತ್ತು ವಿತರಣೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
2025-26 ನೇ ಸಾಲಿನ ಪ.ಜಾತಿ ಮತ್ತು ಪ.ಪಂಗಡ ಮತ್ತು ವಿಶೇಷ ಚೇತನರ ನಿಧಿಯಿಂದ 5.60 ಲಕ್ಷ ವೆಚ್ಚದಲ್ಲಿ ಒಟ್ಟು 116 ಕುಟುಂಬಗಳಿಗೆ ಸೋಲಾರ್ ಹೋಮ್ ಲೈಟ್ ಸಿಸ್ಟಮ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಪ್ರಭಾ ಹಾಗೂ ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ ಹಾಗೂ ಮಜೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



