Home Crime ಉಡುಪಿ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಉಡುಪಿ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಶನಿವಾರ ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಶಿರಸಿ ತಾಲೂಕಿನ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಮಲ್ಪೆ ಪೊಲೀಸ್ ಠಾಣಾಧಿಕಾರಿ ಅನಿಲ್ ಕುಮಾರ್ ಡಿ. ಅವರ ಮಾರ್ಗದರ್ಶನದಲ್ಲಿ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಎಚ್. ಹಾಗೂ ಮೊಹಮ್ಮದ್ ರಫಿ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಳಿಕ ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕಳುಹಿಸಲಾಗಿದೆ.

2021ರಲ್ಲಿ ಮಲ್ಪೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಅವರು ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.