Home Crime ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ಅಧಿಕಾರಿಗಳ ವಶಕ್ಕೆ…!!

ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ಅಧಿಕಾರಿಗಳ ವಶಕ್ಕೆ…!!

ಬೆಂಗಳೂರು: ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಗಾಂಧಿನಗರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಪಾಸಣೆ ನಡೆಸಿದ ವೇಳೆ ಆತನ ಬಳಿ ನಕ್ಷತ್ರ ಆಮೆಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಮೆಜೆಸ್ಟಿಕ್ ಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಗೆ ಹಸ್ತಾಂತರಿಸಲು ಆಮೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣ ಸಂಬಂಧ ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು, ಆಮೆಗಳ ಅಕ್ರಮ ಸಾಗಾಟದ ಜಾಲದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.