Home Latest ಕರಾವಳಿ ಹೈಕೋರ್ಟ್ ಪೀಠಕ್ಕೆ ಆಗ್ರಹಿಸಿ ಹಕ್ಕೊತ್ತಾಯ ಸಭೆ…!!

ಕರಾವಳಿ ಹೈಕೋರ್ಟ್ ಪೀಠಕ್ಕೆ ಆಗ್ರಹಿಸಿ ಹಕ್ಕೊತ್ತಾಯ ಸಭೆ…!!

ಬೈಂದೂರು: ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ತಾಲೂಕು ಮಟ್ಟದ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆಯು ಬೈಂದೂರಿನ ಆಡಳಿತ ಸೌಧದ ಎದುರಿನ ರತ್ತುಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.

ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆ ಸಂಚಾಲಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರು ಮಾತನಾಡಿ ಕರಾವಳಿ ಭಾಗದ ಜನರಿಗೆ ನ್ಯಾಯಾಂಗ ಸೇವೆ ಸುಲಭವಾಗಿ ದೊರೆಯುವ ನಿಟ್ಟಿನಲ್ಲಿ ಹೈಕೋರ್ಟ್ ಪೀಠದ ಅಗತ್ಯವಿದೆ
ಈ ಭಾಗದ ಜನರು ನ್ಯಾಯಕ್ಕಾಗಿ ದೂರದ ಬೆಂಗಳೂರಿಗೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ನಿವಾರಣೆಯಾಗಬೇಕು.ಕರಾವಳಿ
ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.
ಈ ಹೋರಾಟಕ್ಕೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಾಗಿ ಬೆಂಬಲ ನೀಡಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ವಸಂತ್ ಹೆಗ್ಡೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಬೈಂದೂರು ವಕೀಲರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ವಿಜಯ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಬೈಂದೂರು ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕ ಮೋಬಿ ಪಿ.ಸಿ. ವಂದಿಸಿದರು.