Home Latest ಉಡುಪಿ ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ : ಪಕ್ಷ ಸಂಘಟನೆಗೆ...

ಉಡುಪಿ ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ : ಪಕ್ಷ ಸಂಘಟನೆಗೆ ಹೊಸ ಚೈತನ್ಯ…!!

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಈ ನೇಮಕಾತಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಕಾಂಗ್ರೆಸ್ ಸಂಘಟನೆಗೆ ಹೊಸ ಚೈತನ್ಯ ತುಂಬುವ ಜವಾಬ್ದಾರಿ ಇದೀಗ ಕಿಶನ್ ಹೆಗ್ಡೆ ಅವರ ಹೆಗಲೇರಿದೆ.

ಈ ಹಿಂದೆ ಜಿಲ್ಲಾ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರು ಬಳಿಕ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಪಕ್ಷದ ವಿವಿಧ ಹೋರಾಟಗಳು, ಸಂಘಟನಾ ಕಾರ್ಯಕ್ರಮಗಳು ಹಾಗೂ ಜನಪರ ವಿಚಾರಗಳಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಅವರು, ಇದೀಗ ಜಿಲ್ಲಾ ಅಧ್ಯಕ್ಷರಾಗಿ ಮಹತ್ವದ ಹೊಣೆಗಾರಿಕೆ ವಹಿಸಿಕೊಂಡಿದ್ದಾರೆ. ಅವರ ನೇಮಕದಿಂದ ಉಡುಪಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಹೊಸ ಉತ್ಸಾಹ ಮೂಡಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.