ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಸಹಿತ ಓರ್ವನನ್ನು ಕಾಸರಗೋಡಿನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೊಲ್ಲಂಗಾನ ದ ಮುಹಮ್ಮದ್ ರಫೀಕ್ ಬಿ. (39) ಎಂದು ತಿಳಿದು ಬಂದಿದೆ.
ವಿದ್ಯಾನಗರ ಸರ್ಕಾರಿ ಕಾಲೇಜು ಪರಿಸರದಿಂದ ವಾಹನ ತಪಾಸಣೆ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ತಡೆದು ತಪಾಸಣೆ ನಡೆಸಿದಾಗ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ.
ಬಂಧಿತ ಆರೋಪಿಯ ಬಳಿಯಿಂದ 50 ಗ್ರಾಂ ಎಂಡಿಎಂಎಯನ್ನು ಪೊಲೀಸರು ವಶಕ್ಕೆ ಪಡೆದುಕೊಡಿದ್ದಾರೆ.



