ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 18/2005, ಕಲಂ 4 ಮತ್ತು 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೊಳ್ಕಾಡಿ ನಿವಾಸಿ ರಮೇಶ್ ಎಂಬಾತನು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ವಾರಂಟ್ ಆಧಾರದ ಮೇಲೆ ಸೆ. 10, 2026ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ವಾಡಿ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ಜಾಮೀನು ಬಂಧನ ವಿಧಿಸಿದೆ.



