ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರಕ್ಕೆ ಇಂದು ಉಡುಪಿಯಲ್ಲೂ ಬ್ಯಾಂಕ್ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, UFBU ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರದ ಪ್ರಮುಖ ಬೇಡಿಕೆಗಳಲ್ಲಿ ವಾರದಲ್ಲಿ ಐದು ದಿನ ಬ್ಯಾಂಕ್ ಕಾರ್ಯನಿರ್ವಹಿಸುವ ವ್ಯವಸ್ಥೆ ಜಾರಿಗೆ ತರಬೇಕು, ವೇತನ ಹಾಗೂ ಪಿಂಚಣಿ ಸೇರಿದಂತೆ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬುದು ಪ್ರಮುಖವಾಗಿದೆ.
ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಶಾಖಾ ಮಟ್ಟದ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ನಗದು ವ್ಯವಹಾರ, ಚೆಕ್ ಪ್ರಕ್ರಿಯೆ, ಕೆವೈಸಿ ಸೇರಿದಂತೆ ನೇರ ಬ್ಯಾಂಕಿಂಗ್ ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ.
ಆದರೆ UPI, ಮೊಬೈಲ್ ಬ್ಯಾಂಕಿಂಗ್, ಇಂಟರ್‌ನೆಟ್ ಬ್ಯಾಂಕಿಂಗ್ ಹಾಗೂ ATM ಸೇವೆಗಳು ಸಾಮಾನ್ಯವಾಗಿ ಲಭ್ಯವಿರುವ ಸಾಧ್ಯತೆಯಿದೆ.



