ಕಾಪು: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಕ್ಕಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಕಾಪು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮವೊಂದಕ್ಕೆ ಮಕ್ಕಳನ್ನು ಸಾಗಾಟ ಮಾಡಲು ಪಿಕಪ್ ವಾಹನವನ್ನು ಬಳಸಲಾಗುತ್ತಿತ್ತು. ಈ ವೇಳೆ ವಾಹನದ ಬಳಕೆ ಹಾಗೂ ಸುರಕ್ಷತಾ ನಿಯಮಗಳ ಉಲ್ಲಂಘನೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕಾಪು ಪೊಲೀಸರು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಾಲಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 281, 125 ಹಾಗೂ ಮೋಟಾರು ವಾಹನ ಕಾಯ್ದೆಯ ಕಲಂ 66 ಜೊತೆಗೆ 192(ಎ), ಕಲಂ 100 ಜೊತೆಗೆ 177ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಸಾಗಾಟ ಮಾಡುವ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.



