Home Latest ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ…!!

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ…!!

ಉಡುಪಿ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚಾಂತಾರು ರೆಡ್ ಕ್ರಾಸ್ ಜಿಲ್ಲಾ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಅವರನ್ನು ಅತ್ಮೀಯವಾಗಿ ಸನ್ಮಾನಿಸಲಾಯಿತು. ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ, ಮನಶಾಸ್ತ್ರಜ್ಞರಾದ ವೈಶಾಖ್ ವಾರಂಬಳ್ಳಿ ಆಡಿಯೋಲಜಿಸ್ಟ್ ನೆಲಿಶಾ ಹಾಗೂ ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.