ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಧರ್ಮಸ್ಥಳ ದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆಬರುತ್ತಿದ್ದ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರು ಸ್ಥಳಕ್ಕೆಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.



