ಉಡುಪಿ: ನಗರದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ.
ಸವಾರ ಸ್ಕೂಟಿಯಲ್ಲಿ ಹೋಗುತ್ತಿರುವಾಗ ಬ್ಯಾಟರಿ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ರಸ್ತೆ ಮಧ್ಯೆಯೇ ಸ್ಕೂಟಿಯನ್ನು ನಿಲ್ಲಿಸಿ ಕೆಳಗಿಳಿದು ದೂರ ಸರಿದಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ ಬೆಂಕಿ ದೊಡ್ಡದಾಗಿ ಹೊತ್ತಿ ಉರಿದಿದೆ.
ಸವಾರನ ಸಮಯಪ್ರಜ್ಞೆಯಿಂದ ಪ್ರಾಣಾಪಾಯ ತಪ್ಪಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸ್ಕೂಟಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬ್ಯಾಟರಿ ಓವರ್ ಹೀಟ್ ಅಥವಾ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.





