Home Karnataka News ಕರಾವಳಿ ಅಭಿವೃದ್ಧಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್ : ಸಿಎಂಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ…;!

ಕರಾವಳಿ ಅಭಿವೃದ್ಧಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್ : ಸಿಎಂಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ…;!

ಬೆಂಗಳೂರು: ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕರಾವಳಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್, ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ, ಮೀನುಗಾರಿಕೆ ವಿಶ್ವವಿದ್ಯಾಲಯ, ಆಧುನಿಕ ಅಕ್ವಾಪಾರ್ಕ್ ಹಾಗೂ ಮೀನುಗಾರರಿಗೆ ಪರಿಹಾರ ಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಇದರ ಜೊತೆಗೆ ಬ್ರಹ್ಮಾವರ ಕೃಷಿ ಕಾಲೇಜು ಮೇಲ್ದರ್ಜೆಗೇರಿಸುವುದು, ಕರಾವಳಿ ಟೆಂಪಲ್ ಟೂರಿಸಂ ಕಾರಿಡಾರ್, ಮಂಗಳೂರು–ಬೈಂದೂರು ಸಮಾನಾಂತರ ರಸ್ತೆ ಹಾಗೂ ಉಡುಪಿಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೂ ಒತ್ತಾಯಿಸಿದ್ದಾರೆ.

ಮನವಿಗೆ ಸ್ಪಂದಿಸಿರುವ ಸಿಎಂ ಡಿ.ಕೆ. ಶಿವಕುಮಾರ್, ಪ್ರಮುಖ ಅಂಶಗಳನ್ನು ಸಚಿವ ಸಂಪುಟದ ಅಜೆಂಡಾದಲ್ಲಿ ಸೇರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.