Home Crime ವಸತಿಗೃಹವೊಂದರಲ್ಲಿ ಬಾಡಿಗೆಗೆ ಕೊಠಡಿ ಪಡೆದ ಯುವಕ ನೇಣು ಬಿಗಿದು ಆತ್ಮಹತ್ಯೆ…!!

ವಸತಿಗೃಹವೊಂದರಲ್ಲಿ ಬಾಡಿಗೆಗೆ ಕೊಠಡಿ ಪಡೆದ ಯುವಕ ನೇಣು ಬಿಗಿದು ಆತ್ಮಹತ್ಯೆ…!!

ಉಡುಪಿ : ನಗರದ ಖಾಸಗಿ ವಸತಿಗೃಹವೊಂದರಲ್ಲಿ ಬಾಡಿಗೆಗೆ ಕೊಠಡಿ ಪಡೆದ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿ ಗದಗದ ಸಂಗಪ್ಪ ಅವರ ಪುತ್ರ ಮನೋಹರ್ ಮೂಲಿಮನಿ (24ವ) ಎಂದು ತಿಳಿದುಬಂದಿದೆ.

ನಗರ ಪೋಲಿಸ್ ಠಾಣೆಯ ಎಸ್ ಐ ಭರತೇಶ್ ಘಟನಾ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.