Home Latest ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ…!!

ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ…!!

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗಲಿರುವ ಪಂಚಮ ವರ್ಷದ ಉಡುಪಿ- ಉಚ್ಚಿಲ ದಸರಾ 2026 ಇದರ ಆಮಂತ್ರಣ ಪತ್ರಿಕೆ ಯನ್ನು ರವಿವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ ಶಂಕರ್ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಅ.11ರಿಂದ 21ರವರೆಗೆ ನಡೆಯುವ ದಸರಾ ಕಾರ್ಯಕ್ರಮವನ್ನು ಮುಜರಾಯಿ, ಬಂದರು ಹಾಗೂ ಮೀನು ಗಾರಿಕಾ ಸಚಿವ ಕೆ.ಎಸ್.ಬಸಂತಪ್ಪ ಉದ್ಘಾಟಿಸಲಿರುವರು.

ಸಕ್ಕರೆ ಮತ್ತು ಜವಳಿ ಸಚಿವರಾದ ರುದ್ರಪ್ಪ ಎಂ.ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಶದ್, ಆರೋಗ್ಯ ಸಚಿವ ಯು.ಟಿ. ಖಾದರ್ ಭಾಗವಹಿಸಲಿರು ವರು. ದೇವಸ್ಥಾನದಲ್ಲಿ ನಿರ್ಮಿಸಲಾದ ಒಂಬತ್ತನೇ ಗುರುಗಳಾದ ಮಾದವ ಮಂಗಳಢ ಪೂಜಾರ್ ಅವರ ಕಂಚಿನ ಪುತ್ಥಳಿಯನ್ನು ಸೆ.25ರಂದು ಸಚಿವ ಶಿವರಾಜ್ ತಂಗಡಗಿ ಅನಾವರಣಗೊಳಿಸಲಿರುವರು ಎಂದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿದರು.

ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರಾ ಮಲ್ಪೆ, ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘದ ಕಾರ್ಯ ದರ್ಶಿ ಶರಣ್ ಕುಮಾರ್ ಮಟ್ಟು, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ವೇದಪ್ರಕಾಶ್ ಶ್ರೀಯಾನ್, ರತ್ನಾಕರ್ ಸಾಲ್ಯಾನ್ ಮಲ್ಪೆ, ಸುಜಿತ್ ಸಾಲ್ಯಾನ್ ಮೂಲ್ಕಿ, ಗುಂಡು ಬಿ.ಅಮೀನ್ ಕಿದಿಯೂರು, ವಾಸುದೇವ ಸಾಲ್ಯಾನ್ ಕಟಪಾಡಿ, ಸುಧಾಕರ್ ಕುಂದರ್, ದಿನೇಶ್ ಎರ್ಮಾಳು, ಮನೋಜ್ ಕಾಂಚನ್ ಎರ್ಮಾಳ್, ದಿನೇಶ್ ಮೂಳೂರು, ಮೋಹನ್ ಬಂಗೇರ ಕಾಪು, ಸರ್ವೋತ್ತಮ ಕುಂದರ್, ಶಿವಪ್ಪ ಕಾಂಚನ್ ಮಲ್ಪೆ, ಸತೀಶ್ ಕುಂದರ್ ಮಲ್ಪೆ, ನಾರಾಯಣ ಸಿ.ಕರ್ಕೇರ, ಸುಗುಣ ಎಸ್ ಕರ್ಕೇರ, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು.