Home Latest ಮಂಗಳೂರು: ಎಂಡಿಎಂಎ ಮಾರಾಟ ಮಾಡಲು ಯತ್ನ : ಮೂವರ ಬಂಧನ  – ಲಕ್ಷಾಂತರ ಮೌಲ್ಯದ ಸೊತ್ತು...

ಮಂಗಳೂರು: ಎಂಡಿಎಂಎ ಮಾರಾಟ ಮಾಡಲು ಯತ್ನ : ಮೂವರ ಬಂಧನ  – ಲಕ್ಷಾಂತರ ಮೌಲ್ಯದ ಸೊತ್ತು ವಶ..!

ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಫೆ.12 ರಂದು ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೂದು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದರು.

 

ಬಂಧಿತ ಆರೋಪಿಗಳನ್ನು ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಹಾಗೂ ಮೊಹಮ್ಮದ್ ಶಿಫಾನ್ (28) ಎಂದು ಗುರುತಿಸಲಾಗಿದೆ.

 

ಆರೋಪಿಗಳಿಂದ 11,90,000 ಲಕ್ಷ ಮೌಲ್ಯದ 118.13 ಗ್ರಾಂ ತೂಕದ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ KA-19-MQ-3420 ಸಂಖ್ಯೆಯ ಕಾರು ಸೇರಿ ಒಟ್ಟು ₹17,95000 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

 

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಮಾದಕ ವಸ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಹಿನ್ನೆಲೆ ತನಿಖೆ ಮುಂದುವರೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ.

 

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.