Home Latest ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ…!!

ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ…!!

21ನೇ ವರ್ಷದ ಗಣೇಶೋತ್ಸವ ಸಂಭ್ರಮಕ್ಕೆ ಭಕ್ತಿಯ ಮೆರುಗು…

ಕಿನ್ನಿಮುಲ್ಕಿ: ಉಡುಪಿ ನಗರದ ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾದ ವಿಘ್ನವಿನಾಯಕನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಗಣಪತಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರು. ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣಪತಿ ಮೈದಾನದಲ್ಲಿ ಭಕ್ತಿ ಹಾಗೂ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದ್ದು, ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಉತ್ಸವದ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.