Home Art & Entertainment ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿರುವ “ಟಾಸ್” ಚಿತ್ರ…!!

ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿರುವ “ಟಾಸ್” ಚಿತ್ರ…!!

ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನ ದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ ಮತ್ತು ನಟನೆಯ ‘ಟಾಸ್’ ತುಳು ಹಾಗೂ ಕನ್ನಡ ಸಿನಿಮಾ ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿದೆ ಎಂದು ತಿಳಿಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ನಿರ್ದೇಶಕ ಅರ್ಜುನ್ ದೇವ್, ‘ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆಯಲ್ಲಿ ಕನ್ನಡ ಮತ್ತು ತುಳು ಭಾಷೆಯಲ್ಲಿ ತಯಾರಾಗಿರುವ ಈ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಡೆದಿದೆ.

ಸಾಗರ್ ಪೂಜಾರಿ ಅವರು ಚಿತ್ರ ನಿರ್ಮಿಸಿದ್ದಾರೆ.  ಕಥೆ–ಚಿತ್ರಕಥೆ–ಸಂಭಾಷಣೆ ಹಾಗೂ ಗೀತೆಗಳನ್ನು ದೇವದಾಸ್ ಕಾಪಿ ಕಾಡ್ ರಚಿಸಿದ್ದಾರೆ. ಜೋಯೆಲ್ ಶಮನ್ ಡಿಸೋಜ ಛಾಯಾಗ್ರಹಣ ಹಾಗೂ ತಾರಾಗಣದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಇದ್ದಾರೆ ಎಂದು ಹೇಳಿದರು.

ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಫ್ಯಾಮಿಲಿ ಪ್ಯಾಕೇಜ್ ಚಿತ್ರದಲ್ಲಿದೆ ಎಂದು ಅರ್ಜುನ್ ದೇವ್ ತಿಳಿಸಿದ್ದಾರೆ.

ನವೀನ್ ಡಿ. ಪಡೀಲ್, ಭೋಜರಾಜ ವಾಮಂಜೂರು, ಸುತೇಜ್ ಶೆಟ್ಟಿ ಚೈತ್ರಾ ಶೆಟ್ಟಿ, ಜೋಯಲ್, ಸಂದೀಪ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.