ಕೋಟ: ಕಾರ್ಕಡ ಗ್ರಾಮದ ಶಿವರಾಮ ದೇವಾಡಿಗ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವರಾಮ ದೇವಾಡಿಗ ಅವರಿಗೆ ಮೂರು ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿದ್ದು, ಬಳಿಕ ಮಾನಸಿಕವಾಗಿ ಕುಗ್ಗಿದ್ದರು ಎಂದು ಅವರ ಪತ್ನಿ ನಾಗರತ್ನ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 14ರಂದು ರಾತ್ರಿ ಕುಟುಂಬದವರು ಒಟ್ಟಿಗೆ ಊಟ ಮಾಡಿ ಮನೆಯಲ್ಲಿ ಮಲಗಿದ್ದರು. ಸೆಪ್ಟೆಂಬರ್ 15ರಂದು ಬೆಳಗ್ಗೆ ಸುಮಾರು 5.20ಕ್ಕೆ ನಾಗರತ್ನ ಅವರು ಗಮನಿಸಿದಾಗ, ಮನೆಯ ಸಮೀಪ ಶಿವರಾಮ ದೇವಾಡಿಗ ಅವರು ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



