ಜಾಲ್ಸೂರು : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈoಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇದರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ತಂಡ ದ್ವಿತೀಯ ಸ್ಥಾನ ಪಡೆದು ಪ್ರಶಸ್ತಿ ಮುಡಿಗೆರಿಸಿಕೊಂಡಿದ್ದಾರೆ.
ಸಹನಾ, ಹೇಮಾನ್ಯ, ಹೇಮಶ್ರೀ, ಸಾತ್ವಿ, ದಿಶಾ ಇವರುಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಹನಾ ಉತ್ತಮ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ.
ತರಬೇತುದಾರರಿಗೆ ಹಾಗೂ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪೋಷಕ ವೃಂದ,ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದರು.








