ಕಾಪು: ಉದ್ಯಾವರದಲ್ಲಿ ವಾಸವಾಗಿದ್ದ 61 ವರ್ಷದ ಸದಾಶಿವ ಎಂಬವರು ಮನೆಯಿಂದ ಹೊರಗೆ ಹೋದ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಕೋಟೆ ಗ್ರಾಮದ ದೇವು ಪಾಲನ್ (69) ಅವರ ತಮ್ಮ ಸದಾಶಿವ ಅವರು ಸೆಪ್ಟೆಂಬರ್ 15ರಂದು ಬೆಳಗ್ಗೆ ಸುಮಾರು 8 ಗಂಟೆಗೆ ಮನೆಯಿಂದ ಹೊರಗೆ ಹೋಗಿದ್ದರು.
ಆದರೆ ಈವರೆಗೂ ಮನೆಗೆ ವಾಪಸ್ ಬಂದಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 114/2026ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.



