Home Latest ಉಡುಪಿ: ಕಡಿಯಾಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ…!!

ಉಡುಪಿ: ಕಡಿಯಾಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ…!!

ಉಡುಪಿ : ನಗರದ ಕಡಿಯಾಳಿಯ ರಾಜನನ್ನು ನೋಡಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿದರು.

ಬ್ರಹ್ಮಾವರ ಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ 60 ನೇ ವರ್ಷದ ಸಾರ್ವಜನಿಕ ಗಣಪತಿ ಕಡಿಯಾಳಿಗೆ ಆಗಮಿಸಿದ್ದ ಯತ್ನಾಳ್ ಅವರನ್ನು ಸ್ಥಳೀಯ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅವರು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಗಣೇಶೋತ್ಸವದ ಯಶಸ್ವಿ ಆಯೋಜನೆಗೆ ಅಭಿನಂದನೆ ಸಲ್ಲಿಸಿದರು.

ಕರಾವಳಿ ಭಾಗದ ಸಾಂಸ್ಕೃತಿಕ ಪರಂಪರೆ ಮತ್ತು ಹಿಂದೂ ಸಂಘಟನೆಯ ಬಗ್ಗೆ ಮಾತನಾಡಿದ ಯತ್ನಾಳ್, ಕರಾವಳಿಯ ಅಭಿವೃದ್ಧಿಗೆ ಪೂರಕ ಯೋಜನೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.