Home Crime ಹಿರಿಯಡ್ಕ: ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು…!!

ಹಿರಿಯಡ್ಕ: ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು…!!

ಹಿರಿಯಡ್ಕ: ಮನೆಯ ಎದುರಿನ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 51 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೊಮ್ಮರಬೆಟ್ಟು ಗ್ರಾಮದ ಮಾಣೈ ಬೋರ್ಗಲ್‌ಗುಡೆಯಲ್ಲಿ ನಡೆದಿದೆ.

ಮೃತರನ್ನು ಸಾಧು ಕುಲಾಲ್ (51) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 18ರಂದು ಮಧ್ಯಾಹ್ನ 12:45ರ ಸುಮಾರಿಗೆ ಅವರು ಮನೆಯಲ್ಲಿ ತಿರುಗಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದರು. ಬಳಿಕ ಮಧ್ಯಾಹ್ನ 2:30ರ ವೇಳೆಗೆ ಮನೆಯಲ್ಲಿ ಕಾಣಿಸದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ.

ಸಂಜೆ ಸುಮಾರು 3:45ಕ್ಕೆ ಮನೆಯ ಎದುರಿನ ಕೊಟ್ಟಿಗೆಯಲ್ಲಿ ಮರದ ಜಂತಿಗೆ ಚೂಡಿದಾರದ ವೇಲ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಸಾಧು ಕುಲಾಲ್ ಅವರು ಪತ್ತೆಯಾಗಿದ್ದಾರೆ. ತಕ್ಷಣ ಅವರನ್ನು ಹಿರಿಯಡ್ಕ ನರ್ಸಿಂಗ್ ಹೋಂಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಜೀವನದಲ್ಲಿ ಜಿಗುಪ್ಸೆಗೊಂಡು ಅಥವಾ ಇನ್ನಾವುದೋ ಕಾರಣದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.