ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ ಅಂಗಡಿಯ ಗೋಡೆಯೊಂದಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ಈ ಬಗ್ಗೆ ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



