ಮಂಗಳೂರು: ಬಾಲಕಿ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಅಪರಾಧಿ,k ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್‌ಗನ ತ್ವರಿತಗತಿ ವಿಶೇಷ ನ್ಯಾಯಾಲಯವು (FTSC-2) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹80 ಸಾವಿರ ದಂಡ ವಿಧಿಸಿದೆ.
2025ರಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.


