Home Crime ಉಡುಪಿ: KSRTC ಬಸ್ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ…!!

ಉಡುಪಿ: KSRTC ಬಸ್ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ…!!

ಉಡುಪಿ: ನಗರದ ಬನ್ನಂಜೆ ಹೊಸ KSRTC ಬಸ್ ನಿಲ್ದಾಣದ ನೆಲಮಹಡಿಯ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ದಿನಾಂಕ 20/09/2026 ರಂದು ಬೆಳಿಗ್ಗೆ 7 ಗಂಟೆಗೆ KSRTC ಘಟಕದ ಸಿಬ್ಬಂದಿ ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ (53) ಅವರಿಗೆ ಮೂಡನಿಡಂಬೂರು ಗ್ರಾಮದ ಬನ್ನಂಜೆಯಲ್ಲಿರುವ KSRTC ಬಸ್ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ತೆರಳಿದ ಅವರು ಆ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆ ಅಜ್ಜರಕಾಡಿಗೆ ಕರೆದೊಯ್ದಿದ್ದಾರೆ. ಆದರೆ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ UDR ಕ್ರಮಾಂಕ 59/2026, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತರ ಗುರುತು ಪತ್ತೆ ಕಾರ್ಯ ಕೈಗೊಂಡಿದ್ದಾರೆ.