Home Crime ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ : ಸರ್ಕಾರದ ವಿರುದ್ಧ ಸಿಡಿದೆದ್ದ ವಿಎಚ್‌ಪಿ...

ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ : ಸರ್ಕಾರದ ವಿರುದ್ಧ ಸಿಡಿದೆದ್ದ ವಿಎಚ್‌ಪಿ : ಸೆ. 28ಕ್ಕೆ ಬಿಸಿರೋಡಿನಲ್ಲಿ ಪ್ರತಿಭಟನೆ…!!

ಬಂಟ್ವಾಳ: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ವಿರುದ್ಧ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್‌ಪಿ ಮುಖಂಡ ಪ್ರಸಾದ್ ಕುಮಾರ್ ರೈ, “ಮೈಸೂರಿನ ವಿಶೇಷ ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ, ಜೈಲಿನಿಂದ ಬಿಡುಗಡೆಯಾಗದಂತೆ ಗೂಂಡಾ ಕಾಯ್ದೆ ಹೇರಿರುವುದು ಸರ್ಕಾರದ ದಮನ ನೀತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ನಡೆಯುವ ಈ ಹೋರಾಟದಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಭುಜಂಗ ಕುಲಾಲ್, ಲೋಹಿತ್ ಪಣೋಲಿಬೈಲ್, ಸಂತೋಷ್ ಸರಪಾಡಿ ಮತ್ತು ಸಚಿನ್ ಮೇಲ್ಯಾರ್ ಉಪಸ್ಥಿತರಿದ್ದರು.

ಸತ್ಯಕ್ಕೆ ನ್ಯಾಯಾಲಯದಲ್ಲೂ ಜಯ ಸಿಕ್ಕರೂ ಸರ್ಕಾರದ ದಮನಕಾರಿ ನೀತಿ ಕೊನೆಯಾಗಿಲ್ಲ!ದೌರ್ಜನ್ಯದ ವಿರುದ್ಧ ಧ್ವನಿ ಎತ್ತಲು ತುಳುನಾಡಿನ ಪ್ರತಿಯೊಬ್ಬ ಹಿಂದೂವೂ ಜಾಗೃತನಾಗಬೇಕಿದೆ. ಈ ಸರ್ಕಾರದ ಹಿಂದೂ ದಮನ ನೀತಿಯನ್ನು ಖಂಡಿಸಿ ಸೆಪ್ಟೆಂಬರ್ 28 ರಂದು ಬಿ.ಸಿ. ರೋಡ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ವಿಹಿಂಪ ಮುಖಂಡ ಶರಣ ಪಂಪ್ ವೆಲ್ ಮನವಿ ಮಾಡಿದ್ದಾರೆ.