Home Latest ಮೂಡುಬೆಳ್ಳೆ – ಕಟ್ಟಿಂಗೇರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನ್ಸೆಂಟ್ ಫೆರ್ನಾಂಡಿಸ್ ರಾಜೀನಾಮೆ : ಗೊಂದಲದಲ್ಲಿ ಮೂಡುಬೆಳ್ಳೆ...

ಮೂಡುಬೆಳ್ಳೆ – ಕಟ್ಟಿಂಗೇರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನ್ಸೆಂಟ್ ಫೆರ್ನಾಂಡಿಸ್ ರಾಜೀನಾಮೆ : ಗೊಂದಲದಲ್ಲಿ ಮೂಡುಬೆಳ್ಳೆ ಕಾಂಗ್ರೆಸ್ ಕಾರ್ಯಕರ್ತರು…!!

ಮೂಡುಬೆಳ್ಳೆ : ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದ, ವಿಶೇಷವಾಗಿ ಮೂಡುಬೆಳ್ಳೆ ಕಟ್ಟಿಂಗೇರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವಿನ್ಸೆಂಟ್ ಫೆರ್ನಾಂಡಿಸ್ ಕಾರಣಾಂತರಗಳಿಂದ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಭಾಗದಲ್ಲಿ ಪ್ರಬಲ ನಾಯಕರಾಗಿದ್ದ ವಿನ್ಸೆಂಟ್ ಫೆರ್ನಾಂಡಿಸ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಇವರು, ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲೂ ಸಕ್ರಿಯರಾಗಿದ್ದರು. ಮೂಡುಬೆಳ್ಳೆಯ ಸಂತ ಲಾರೆನ್ಸರ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರಾಗಿದ್ದ ಇವರು, ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು. ಪ್ರಸ್ತುತ ವೈಯುಕ್ತಿಕ ಕಾರಣಗಳಿಗಾಗಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದರೂ, ರಾಜೀನಾಮೆಯ ಹಿಂದೆ ವಿನ್ಸೆಂಟ್ ಫೆರ್ನಾಂಡಿಸ್ ರವರಿಗೆ ಪಕ್ಷದ ಹಿರಿಯ ನಾಯಕರುಗಳ ವರ್ತನೆ ಮತ್ತು ಸ್ಪಂದನೆ ನೋವುಂಟು ಮಾಡಿದೆ ಎಂದು ತಿಳಿದುಬಂದಿದೆ.

ಮೂಡುಬೆಳ್ಳೆ ಪರಿಸರದಲ್ಲಿ ಕ್ರೈಸ್ತ ಸಮಾಜದ ಪ್ರಬಲ ನಾಯಕರಾಗಿದ್ದ ಇವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷದ ನಾಯಕರು ಅಂಗೀಕರಿಸಿತ್ತಾರೋ ಅಥವಾ ಅವರ ಮನಪರಿವರ್ತಿಸುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ