ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕೊಕ್ಕಡ ಗ್ರಾಮದ ಪಿಜಿನಡ್ಕ ಮನೆಯ ತನಿಯಪ್ಪ ಗೌಡ ಎಂದು ತಿಳಿದು ಬಂದಿದೆ. ಇವರ ಪತ್ನಿ ಚಿನ್ನಮ್ಮ @ ಚಿತ್ರಾವತಿ ಅವರು ಸೆಪ್ಟೆಂಬರ್ 18 ರಂದು ಕೆರೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಪತ್ನಿಯ ಸಾವಿನಿಂದ ಹಾಗೂ ಮದ್ಯಪಾನದ ಚಟದಿಂದ ಮಾನಸಿಕವಾಗಿ ನೊಂದಿದ್ದ ತನಿಯಪ್ಪ ಗೌಡ ಅವರು, ಸೆಪ್ಟೆಂಬರ್ 18 ರ ಸಂಜೆ 4 ಗಂಟೆಯಿಂದ ಸೆಪ್ಟೆಂಬರ್ 23 ರ ಬೆಳಿಗ್ಗೆ 9 ಗಂಟೆಯ ಅವಧಿಯಲ್ಲಿ ತಮ್ಮ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿ ಬಾಬು ಗೌಡ (74) ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ UDR: 73/2026 ಕಲಂ 194 BNSS 2023 ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



